ಬೆಂಗಳೂರು: ವಿಧಾನ ಪರಿಷತ್ ಪದವೀಧರರು ಮತ್ತು ಶಿಕ್ಷಕರ 6 ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.
ಬೆಂಗಳೂರು, ಮೈಸೂರು ಹಾಗೂ ಕುಲಬುರಗಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಮೈಸೂರು ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮುನ್ನಡೆ ಸಾಧಿಸಿದ್ದಾರೆ. ಮೈಸೂರು ದಕ್ಷಿಣ ಶಿಕ್ಷಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಮುನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡಗೆ ಹಿನ್ನಡೆಯಾಗಿದೆ.
ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಕಲಾ ಕಾಲೇಜಿನಲ್ಲಿ ನಡೆಯುತ್ತಿದ್ದು, ಈಶಾನ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಲಬುರಗಿಯ ವಿಶ್ವವಿದ್ಯಾಲಯದ ಹೇಮರೆಡ್ಡಿ ಮಲ್ಲಮ್ಮ ಕಟ್ಟಡದಲ್ಲಿ ನಡೆಯುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿದೆ.
ಪ್ರತಿ ಕ್ಷೇತ್ರಕ್ಕೂ 14 ಟೇಬಲ್‌ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್‌ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ಟೇಬಲ್‌ಗೂ ಒಬ್ಬರಂತೆ ಏಜೆಂಟರನ್ನು ನಿಯೋಜನೆ ಮಾಡಲಾಗಿದ್ದು ಎಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.
Post a comment
Log in to write reviews