2024-09-19 04:40:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

VRL ಬಸ್ ಅಪಘಾತ: ಇಬ್ಬರ ಸಾವು

ಯಾದಗಿರಿ: ಕಲಬುರಗಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಆರ್‌ಎಲ್‌ ಸಂಸ್ಥೆಯ ಬಸ್‌ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲೂಕಿನ ಹತ್ತಿಗೂಡರ ಗ್ರಾಮದ ಸೇತುವೆ ಬಳಿ ನಡೆದಿದೆ.
ಬೆಂಗಳೂರಿಗೆ ಬರುತ್ತಿದ್ದ ಬಸ್ನಲ್ಲಿ 37ಪ್ರಯಾಣಿಕರಿದ್ದರು. ಹತ್ತಿಗೂಡರ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು 7 ಜನರ ಸ್ಥಿತಿ ಬಹಳ ಗಂಭೀರವಾಗಿದೆ. ಬಸ್‌ನಲ್ಲಿ ಸಿಲುಕಿಕೊಂಡ ಗಾಯಾಳುಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದು ಗಾಯಾಳುಗಳನ್ನು  ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. 
ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a comment

No Reviews