ಟಾಪ್ 10 ನ್ಯೂಸ್
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಕೆಲವೆಡೆ ‘ರೆಡ್ ಅಲರ್ಟ್’ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಕರಾವಳಿ ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಮೀನುಗಾರರು ಕಡಿಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಹಲವೆಡೆ ಶನಿವಾರ ದಿನವಿಡೀ ಧಾರಾಕಾರ ಮಳೆ ಸುರಿದಿದ್ದು, ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜೂ.10, 11 ರಂದು ಮೀನುಗಾರರು ಕಡಿಲಿಗೆ ಇಳಿಯದಂತೆ ಎಚ್ಚರಿಕೆ ನೀಡಿ ರೆಡ್ ಅಲರ್ಟ್ ಮತ್ತು ಜೂ.12 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ದಾವಣಗೆರೆ, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Poll (Public Option)

Post a comment
Log in to write reviews