
ಬೆಂಗಳೂರು: ಅಶ್ಲೀಲ ವೀಡಿಯೋಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್‌ನ ಈ ಹಿಂದಿನ ತೀರ್ಪನ್ನು ಸುಪ್ರೀಂಕೋರ್ಟ್ ತೆಗೆದು ಹಾಕುವಂತೆ ಈ ಮಹತ್ವದ ಆದೇಶವನ್ನು ಹೊರಡಿಸಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇರುವ ತ್ರಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ. ಮದ್ರಾಸ್ ಹೈಕೋರ್ಟ್‌ನ ಆದೇಶವು ಆಘಾತಕಾರಿ ಎಂದು ಹೇಳಿದ್ದ ತ್ರಿಸದಸ್ಯ ಪೀಠವು, ಆ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಈ ಹಿಂದೆ ಒಪ್ಪಿತ್ತು.
ಮೊಬೈಲ್ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ಮದ್ರಾಸ್ ಹೈಕೋರ್ಟ್ ಈ ಆದೇಶವನ್ನು ನೀಡಿತ್ತು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಶ್ಲೀಲ ಚಿತ್ರಗಳನ್ನು ನೋಡುವ ಗಂಭೀರ ಮಾನಸಿಕ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ಅವರನ್ನು ಶಿಕ್ಷಿಸುವ ಬದಲು ಸಮಾಜವು ಅವರಲ್ಲಿ ಅರಿವು ಮೂಡಿಸುವ ಅಗತ್ಯತೆ ಬಹಳಷ್ಟಿದೆ ಎಂದು ಹೇಳಿಕೆ ನೀಡಿತ್ತು ಮಕ್ಕಳ ಅಶ್ಲೀಲತೆಯ ಕಂಟೆಂಟ್ ನಿರ್ಮಿಸುವುದು ಮತ್ತು ಡೌನ್‌ಲೋಡ್ ಮಾಡುವುದು ಮಾತ್ರವಲ್ಲದೆ, ಅವುಗಳನ್ನು ಪ್ರಕಟಿಸುವುದು ಮತ್ತು ಹಂಚಿಕೊಳ್ಳುವುದು ಕೂಡಾ ಅಪರಾಧವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
Poll (Public Option)

Post a comment
Log in to write reviews