
ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮನೆ ಮತ್ತು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ನಿರಾಶ್ರಿತರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ.
ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಹಣವನ್ನು ಕೇರಳದ ಸಿಎಂ ಫಂಡ್ ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ.
ಸ್ಟಾರ್ ನಟ ಮಮ್ಮುಟ್ಟಿ ಮತ್ತು ಪುತ್ರ ದುಲ್ಕರ್ ಸಲ್ಮಾನ್ ಜೊತೆಯಾಗಿ 35 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಫಹಾದ್ ಫಾಸಿಲ್, ನಜ್ರಿಯಾ ಜೋಡಿ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್, ಕೇರಳದ ಸಿಎಂ ಫಂಡ್ ಗೆ 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ನೆರವಾಗಿದ್ದಾರೆ. ಸೂರ್ಯ ಮತ್ತು ಜ್ಯೋತಿಕಾ ದಂಪತಿ, ನಟ ಕಾರ್ತಿ ಜಂಟಿಯಾಗಿ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ರಶ್ಮಿಕಾ ಮಂದಣ್ಣ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟ ಹಾಗೂ ನಟಿಯರ ನಡೆಗೆ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.
Poll (Public Option)

Post a comment
Log in to write reviews