
ಬೆಂಗಳೂರು: ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಆಮಿಷದ ನಡುವೆಯೂ ಜನ ಬಿಜೆಪಿ-ಜೆಡಿಎಸ್‌ಗೆ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಗೂಬೆ ಕೂರಿಸುತ್ತಿದ್ದರೂ ಅದನ್ನು ಧಿಕ್ಕರಿಸಿ ಜನ ಆಶೀರ್ವಾದ ಮಾಡಿದ್ದಾರೆ. 9 ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಸಚಿವರು ಇರುವ ಕ್ಷೇತ್ರಗಳಲ್ಲಿ ಕೂಡ ಎನ್‌ಡಿಎ ಲೀಡ್ ಪಡೆದುಕೊಂಡಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್ ದುರಾಡಳಿತದಿಂದ ಕರ್ನಾಟಕ ಎಲ್ಲ ವಿಧಗಳಲ್ಲೂ ಹಿಂದೆ ಸರಿದಿದೆ. ಬೋರ್ಡ್ ಅಧ್ಯಕ್ಷರು ಅನುದಾನಕ್ಕೆ ಕಾಯುತ್ತಿರುವ ರೀತಿ ಸಿಎಂ ವರ್ತಿಸುತ್ತಿದ್ದಾರೆ. ಮುಂದಿನ ದಿನಗಳು ಹೋರಾಟದ ದಿನಗಳು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು ಬರುತ್ತವೆ. ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆಯಲ್ಲಿ ಸಂಸದರು ಹೆಚ್ಚು ಶ್ರಮ ಹಾಕಬೇಕು ಎಂದು ಸೂಚನೆ ನೀಡಿದರು.
Poll (Public Option)

Post a comment
Log in to write reviews