
ಮಂಗಳೂರು: ಜಿಲ್ಲೆಯ ಬೋಳಿಯಾರ್ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಚೂರಿ ಇರಿತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ನಮ್ಮೂರ ಸಮಸ್ಯೆ ನಾವೇ ಸರಿ ಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಮಂಗಳೂರಿನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸೌಹರ್ದತೆಯ ಸಂಕೇತ. ಇಲ್ಲಿ ಎಲ್ಲರು ಪರಸ್ಪರ ಸಹೊದರರಂತೆ ಬಾಳುತ್ತಿದ್ದಾರೆ. ಈ ಸಮಸ್ಯೆಯನ್ನು ಊರಿನವರು ಮತ್ತು ಸ್ಥಳೀಯ ಪೊಲೀಸರು ಒಗ್ಗೂಡಿ ಬಗೆಹರಿಸಿಕೊಳ್ಳುತ್ತಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ ಎಂದಿದ್ದಾರೆ.
ಭಾರತ್ ಮಾತಾ ಕೀ ಜೈ’ ಅಂತ ಎಲ್ಲಾ ದೇಶಭಕ್ತ ಹೇಳಬಹುದು ಅದಕ್ಕೆ ಯಾರು ಅಡ್ಡಿ ಪಡಿಸುವುದಿಲ್ಲ. ಆದರೆ ಅಲ್ಲಿ ಬೇರೆ ಏನು ಅವಾಚ್ಯ ಶಬ್ದ ಬಳಸಿ ಬೈದಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ ಇದನ್ನು ಪೊಲಿಸರು ಸಿಸಿಟಿವಿ ಸಹಾಯದಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಕೆಲಸ ಮಾಡಲು ಬಿಡಿ, ಅವರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ತಿಳಿಸಿದರು.
Poll (Public Option)

Post a comment
Log in to write reviews