
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉಳಿದ ಭಾಗಗಳಲ್ಲಿ ಮೋಡಕವಿದ ವಾತಾವರಣವಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಇನ್ನುಎರಡು ದಿನಗಳಲ್ಲಿ ರಾಜ್ಯದ ಕರಾವಳಿ ಭಾಗಗಳಿಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿದ್ದು. ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದ ತಿರುವಿಕೆ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳಲಿದೆ ಎಂದಿದೆ.
Poll (Public Option)

Post a comment
Log in to write reviews