ಎಚ್.ಡಿ ಕೋಟೆ: ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸುವರ್ಣ ಹಾಗೂ ಟಿಎಚ್ಒ ಡಾ.ಟಿ ರವಿಕುಮಾರ್. ತಂಡದವರು ಕೇರಳ ಗಡಿ ಭಾಗ ಡಿಬಿ ಮಚ್ಚೂರು ಹಾಡಿಗೆ ಭೇಟಿ ನೀಡಿ ಪರಿಶೀಲಿನೆ ನಡೆಸಿದರು. ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಹೇಳಿದರು. ವೆಸ್ಟ್ ನೈಲ್ ಜ್ವರದ ಭೀತಿ ಹೆಚ್ಚಾಗಿ ಕಾಡುತ್ತಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿದೆ. ಇದು ರಾಜ್ಯಕ್ಕೂ ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೈಸೂರು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಡಿಯೊಳಗೆ ಬಂದು ಹೋಗುವ ವಾಹನಗಳ ಸವಾರರ ಮೇಲೆ ನಿಗಾ ಇರಿಸಲಾಗಿದೆ .
Post a comment
Log in to write reviews