
ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಜಿ.ಪರಮೇಶ್ವರ್, ಸೂರಜ್ ರೇವಣ್ಣ ವಿರುದ್ಧ ಕೇಳಿ ಬರುತ್ತಿರುವ ಆರೋಪ ವಿಚಾರವಾಗಿ ಇನ್ನೂ ಯಾರ ಕಡೆಯಿಂದಲೂ ನಮಗೆ ಅಧಿಕೃತ ದೂರು ಬಂದಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ. ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ನಾವು ತನಿಖೆ ಮಾಡುತ್ತೇವೆ. ಸಿಐಡಿಗೆ ಕೇಸು ಕೊಡುವ ಮುನ್ನ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಖಾಸಗಿ ವಾಹಿನಿ ಅವರನ್ನು ಕರೆದು ಮಾತನಾಡುತ್ತೇವೆ ಎಂದರು.
Poll (Public Option)

Post a comment
Log in to write reviews