
ರಾಮನಗರ: ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ನಟ ದರ್ಶನ್, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಸ್ಪೋಟಕ ಹೇಳಿಕೆ.
ಕಾಂಗ್ರೆಸ್‌ನಿಂದ ಡಿಕೆ.ಬ್ರದರ್ಸ್, ದರ್ಶನ್ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂಬರ್ಥದಲ್ಲಿ ಸಿಪಿವೈ ಹೇಳಿಕೆ ನೀಡಿದ್ದಾರೆ. ಡಿ.ಕೆ.ಸುರೇಶ್ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದಿದ್ದರು. ಆ ಅಚ್ಚರಿ ಅಭ್ಯರ್ಥಿ ಈಗ ಜೈಲು ಪಾಲಾಗಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಚಿತ್ರನಟರೊಬ್ಬರನ್ನು ಕಾಂಗ್ರೆಸ್ ಪರವಾಗಿ ಚುನಾವಣೆಗೆ ನಿಲ್ಲಿಸಲು ಡಿ.ಕೆ.ಬ್ರದರ್ಸ್ ಪ್ಲ್ಯಾನ್ ಮಾಡಿದ್ದರು. ಆ ವ್ಯಕ್ತಿ ಯಾರು ಎಂದು ನೀವೇ ಊಹೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸ್ತಿದೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ. ಆದರೆ ಈ ರೀತಿ ಅನಾಹುತ ಆಗಿ ಹೋಗಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
Poll (Public Option)

Post a comment
Log in to write reviews