2024-12-24 06:47:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜಿಲ್ಲೆಯಲ್ಲಿ ಇನ್ನೆರೆಡು ದಿನ ವ್ಯಾಪಕ ಮಳೆ: ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಸೂಚನೆ

ಬೆಂಗಳೂರುಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ (rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಳಿದೆ

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಶಿವಮೊಗ್ಗದಲ್ಲಿ ಭಾರೀ ಮಳೆ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಯಾಗಳಿದ್ದು ಚಿಕ್ಕಮಗಳೂರು ಕೊಡಗು ಹಾಸನದಲ್ಲಿ ಲಘು ಮಳೆಯಾಗಳಿದೆ,ದಕ್ಷಿಣ ಕನ್ನಡ ಉಡುಪಿಯಲ್ಲಿ ಹಗುರ ಮಳೆಯಾಗುವ ಸಾಧ್ಯಾತೆಯಿದೆ.

ಬೆಂಗಳೂರಿನಲ್ಲಿ ತುಂತುರು ಮಳೆ

ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಆಗಸ್ಟ್‌ 31ರವರೆಗೆ ಮೀನುಗಾರರಿಗೆ ಅಲರ್ಟ್

ಆಗಸ್ಟ್‌ 31ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ  ಹವಮಾನ ಇಲಾಕೆ ಎಚ್ಚರಿಕೆ ನೀಡಿದೆ.

Post a comment

No Reviews