
ಬೆಂಗಳೂರು : ಇಂದಿಗೆ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಮತ್ತೆ ದರ್ಶನ್ಗೆ ಜೈಲು ವಾಸ ಮುಂದುವರೆಯುವ ಸಾಧ್ಯತೆ ಇದೆ ಎಂದು ಕೇಳಿಬರುತ್ತಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತ್ತಿರುವ ನಟ ದರ್ಶನ್, ಜೈಲಿನಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಮತ್ತೆ ದರ್ಶನ್ಗೆ ಜೈಲು ವಾಸ ಮುಂದುವರೆಯುವ ಸಾಧ್ಯತೆ ಇದೆ.
ದರ್ಶನ್ ಹಾಗೂ ಗ್ಯಾಂಗ್ನ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗುವ ಹಿನ್ನೆಲೆ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಈ ವೇಳೆ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆಯಿದೆ.
ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಏಕೆ ಜಾಮೀನು ನೀಡಬಾರದು ಎಂಬುದಕ್ಕೆ ದೊಡ್ಡ ಪಟ್ಟಿಯನ್ನ ಸಿದ್ಧಪಡಿಸಿರೋ ಪೊಲೀಸರು, ಇವತ್ತು ನ್ಯಾಯಾಲಯಕ್ಕೆ ರಿಮಾಂಡ್ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಇನ್ನು ಇದುವರೆಗೂ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಆಗಲಿ ಅಂತಾ ದರ್ಶನ್ ಪರ ವಕೀಲರು ಕಾಯ್ತಿದ್ದಾರೆ. ಕೊಲೆ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಪೊಲೀಸರಿಗೆ 90 ದಿನಗಳ ಕಾಲಾವಕಾಶ ಇರುತ್ತೆ. ಒಂದು ವೇಳೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಲ್ಲಿ, ಚಾರ್ಜ್ ಶೀಟ್ ಸಲ್ಲಿಕೆಗೂ ಮುನ್ನ ಕೊಲೆ ಕೇಸ್ನಲ್ಲಿ ಬೇಲ್ ಸಿಗೋದಿಲ್ಲ. ಹೀಗಾಗಿ ಚಾರ್ಜ್ ಶೀಟ್ ಸಲ್ಲಿಕೆ ಆಗುವವರೆಗೂ ದರ್ಶನ್ ಹಾಗೂ ಗ್ಯಾಂಗ್ಗೆ ನ್ಯಾಯಾಂಗ ಬಂಧನವೇ ಗತಿ ಎಂದು ಹೇಳಲಾಗುತ್ತಿದೆ.
Poll (Public Option)

Post a comment
Log in to write reviews