
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎನ್ನುವ ಬಗ್ಗೆ ಸಾಕಷ್ಟು ಕೂಗು ಕೇಳಿಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ಎಂ ಸುರೇಶ್ ಏಕಾಏಕಿ ಬ್ಯಾನ್ ಮಾಡಲು ಸಾಧ್ಯವಿಲ್ಲ , ಕಲಾವಿದರ ಸಂಘ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನನ್ನ ತೀರ್ಮಾನ ನಿಂತಿದೆ ಎಂದಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 13 ಜನರ ಬಂಧನವಾಗಿದ್ದಾರೆ. ಅವರುಗಳು ಆರೋಪಿಗಳಷ್ಟೇ, ಅಪರಾಧಿಗಳಲ್ಲ.ಆಗಾಗಿ ಏಕಾಏಕಿ ಬ್ಯಾನ್ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
Poll (Public Option)

Post a comment
Log in to write reviews