ರಾಜಕೀಯ
ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಹೋರಾಟ ಮಾಡಲಾಗುತ್ತದೆ: ಅಹಿಂದ ರಾಜ್ಯಾಧ್ಯಕ್ಷ

ಹುಬ್ಬಳ್ಳಿ: ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು. ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸಿದರು.
Poll (Public Option)

Post a comment
Log in to write reviews