
ನವದೆಹಲಿ: ವಿಪಕ್ಷ ನಾಯಕರಾಗಲು ಪಕ್ಷದಿಂದ ರಾಹುಲ್ ಗಾಂಧಿಗೆ ಒತ್ತಡ ಬರುತ್ತಿದ್ದರೂ ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ಕೋರಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರನ್ನುವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿ ಕಾಂಗ್ರೆಸ್‌ನ ಸಂಸದೀಯ ಮಂಡಳಿಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿತ್ತು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ್ದರೂ, ಈ ಬಗ್ಗೆ ಏನನ್ನೂ ಹೇಳಿಲ್ಲ. ಅಲ್ಲದೆ ಈ ಸಂಬಂಧ ಸ್ವತಃ ನಿರ್ಣಯ ತೆಗೆದುಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡುವಂತೆ ಅವರು ಕೋರಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.
Poll (Public Option)

Post a comment
Log in to write reviews