ಬೆಂಗಳೂರು: ರಾಜ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿರುವ ಮುಡಾ ಹಗರಣ. ಪ್ರಕರಣದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಸಂಕಷ್ಟ ಶುರುವಾಗಿದೆ. ಇನ್ನೂ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಮೈತ್ರಿ ನಾಯಕರಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ಕಿಡಿ ಕಾರಿದ್ದಾರೆ.
ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಇಂದು ಅದೇ ಕ್ಷೇತ್ರದಲ್ಲಿ ನಿಂತು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಅಷ್ಟೇ ಅಲ್ಲ, ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಲ್ಲದೆ, ಸ್ವಪಕ್ಷ ಜೆಡಿಎಸ್ಗೇ ಟಾಂಗ್ ನೀಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು. ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಸದ್ಯ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅದೇ ರೀತಿ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಜಿ.ಟಿ.ದೇವೇಗೌಡ ಪ್ರತಿಪಾದಿಸಿದರು.
Post a comment
Log in to write reviews