
ಬೆಂಗಳೂರು: ವಾಕಿಂಗ್ ಮಾಡುತ್ತಿದ್ದ ವೃದ್ದ ಮಹಿಳೆಯ ಮೇಲೆ ಬೀದಿನಾಯಿಗಳ ಗುಂಪದೊದ್ದು ಏಕಾಏಕಿ ದಾಳಿ ನಡೆಸಿದ್ದು, ಅಮಾನುಷವಾಗಿ ತಿಂದುಹಾಕಿರುವ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ನಡೆದಿದೆ.
60 ವರ್ಷದ ಆಸುಪಾಸಿನ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ 7-8 ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿವೆ. ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದೆ. ಬಳಿಕ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.
Poll (Public Option)

Post a comment
Log in to write reviews