
ಕೊಡಗು : ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.
ಕಾತಯಿ (72) ಮೃತ ದುರ್ದೈವಿ. ಎಂದು ತಿಳಿದು ಬಂದಿದೆ ,ಮನೆಯ ಸಮೀಪವೇ ಮಹಿಳೆ ಮೇಲೆ ಕಾಡನೆ ದಾಳಿ ನಡೆಸಿ ಕೊಂದು ಹಾಕಿದೆ, ಮಗನ ಮನೆಯಿಂದ ಹೊರ ಬರುತ್ತಿದ್ದ ವೇಳೆ ರೊಚ್ಚಿಗೆದ್ದ ಕಾಡಾನೆಯೂ ದಾಳಿ ಮಾಡಿದೆ. ವೃದ್ಧೆಯಾಗಿರುವುದರಿಂದ ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚನ್ನಯ್ಯನಕೋಟೆ ಘಟನೆ ನಡೆದಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
Poll (Public Option)

Post a comment
Log in to write reviews