
ಕೆಎಸ್‌ಆರ್‌ಸಿಟಿ ಬಸ್‌ನಲ್ಲಿ ಬಂದಿದ್ದ ಮಹಿಳೆರಿಬ್ಬರು ಕೇವಲ ಸೀಟ್‌ಗಾಗಿ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿರುವ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಸರ್ಕಾರಿ ಬಸ್‌ನಲ್ಲಿ ಬಂದಿದ್ದರು. ಬಸ್‌ನಲ್ಲಿ ಸೀಟ್ ನನ್ನದು ನನ್ನದು ಎಂದು ಜಗಳವಾಡಿದ್ದಾರೆ. ಗಲಾಟೆ ತಾರಕಕ್ಕೆ ಏರಿ ಕೈಕೈ ಮಿಲಾಯಿಸಿದ್ದಾರೆ. ಬಳಿಕ ಚಪ್ಪಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಇನ್ನೂ ನಡುವೆ ಯಲ್ಲಮ್ಮದೇವಿ ದರ್ಶನಕ್ಕೆ ಜಗಳದ ವೇಳೆ ಅಡ್ಡ ಬಂದ ಬಾಲಕಿಗೂ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಸದ್ಯ ಮಹಿಳೆಯರು ಚಪ್ಪಲಿಯಿಂದ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Poll (Public Option)

Post a comment
Log in to write reviews