2024-12-24 07:42:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

1 ಲಕ್ಷಕ್ಕಾಗಿ ಕಾಂಗ್ರೆಸ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಮಹಿಳೆಯರು

ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ರೂ ತಮ್ಮ ಖಾತೆಗೆ ಜಮಮಾಡುವೆವು ಎಂದು ತಮ್ಮ ಪ್ರನಾಳಿಕೆಯಲ್ಲಿ ಗ್ಯಾರಂಟಿ ಘೋಷಣೆ ಮಾಡಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಧೀಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ವಿಫಲವಾಗಿದೆ. ಎನ್‍ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಮುಂದಾಗಿದೆ. ಇತ್ತ ಇಂಡಿಯಾ ಒಕ್ಕೂಟದ ನಾಯಕರೂ ಕೂಡ ಅಧಿಕಾರದ ಗದ್ದುಗೆ ಏರಲು ಪ್ರಯತ್ನವನ್ನೇನು ನಿಲ್ಲಿಸಿಲ್ಲ. ಇದರ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರು ಕಾಂಗ್ರೆಸ್ 1 ಲಕ್ಷ ರೂ ಗ್ಯಾರಂಟಿ ಘೋಷಣೆ ಮಾಡಿತ್ತು ಅದರಂತೆ ನಮ್ಮ ಖಾತೆಗೆ ಒಂದು ಲಕ್ಷ ರೂ ಜಮಾಮಮಾಡಿ ಎಂದು ಕಾಂಗ್ರೆಸ್ ಕಚೇರಿಗೆ ಲಗ್ಗೆ ಇಟ್ಟಿದ್ದಾರೆ.
ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ, ಕೊಡಿ ಎಂದು ಮುಸ್ಲಿಂ ಮಹಿಳೆಯರು ಲಖನೌದ ಕಾಂಗ್ರೆಸ್ ಕಚೇರಿ ಎದುರು ಸಾಲಾಗಟ್ಟಿ ನಿಂತಿರುವ ದೃಶ್ಯ ಈಗ ವೈರಲ್ ಆಗಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 1 ಲಕ್ಷ ರೂ. ಸೇರಿ ಹಲವು ಗ್ಯಾರಂಟಿಗಳನ್ನು ಗೋಷಣೆ ಮಾಡಿತ್ತು. ಈ ಕುರಿತು ಗ್ಯಾರಂಟಿ ಕಾರ್ಡ್ಅನ್ನು ಕೂಡ ಮನೆ ಮನಗೆ ಹಂಚಿತ್ತು. ಈಗ ಆ ಕಾರ್ಡ್ ಅನ್ನು ಹಿಡಿದುಕೊಂಡ ಮುಸ್ಲಿಂ ಮಹಿಳೆಯರು ಪಕ್ಷದ ಕಚೇರಿ ಎದುರು ಸಾಲಾಗಟ್ಟಿ ನಿಂತಿದ್ದಾರೆ.
ನಮಗೆ 1 ಲಕ್ಷ ರೂ. ನೀಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಹೇಳಿದ್ದೀರಿ ಅದರಂತೆ, ನಾವು ಗ್ಯಾರಂಟಿ ಕಾರ್ಡ್‍ಗಳನ್ನು ಹಿಡಿದುಕೊಂಡು ಬಂದಿದ್ದೇವೆ, ಅವರು ಕೊಡುತ್ತೇನೆ ಎಂದಿದ್ದರು, ಫಾರ್ಮ್ ಕೂಡ ಕೊಟ್ಟಿದ್ದರು, ಅವುಗಳನ್ನೂ ನಮ್ಮ ಬಳಿ ತೆಗೆದುಕೊಂಡು ಬಂದಿದ್ದೇವೆ. ಇದುವರೆಗೆ ನಮಗೆ ಸೂಕ್ತ ಉತ್ತರವಾಗಲಿ, 1 ಲಕ್ಷ ರೂ ಹಣವಾಗಲಿ ಇನ್ನೂ ಸಿಕ್ಕಿಲ್ಲ ಎಂದು ಮುಸ್ಲಿಂ ಮಹಿಳೆಯರು ಹೇಳಿದ್ದಾರೆ. ನಮಗೆಲ್ಲಾ 12 ಗಂಟೆಗೆ ಬನ್ನಿ ಎಂದಿದ್ದರು, ಅದಕ್ಕಾಗಿ ನಾವು ಬಂದಿದ್ದೇವೆ. ಇದುವರೆಗೆ ನಮಗೆ ಏನೂ ಸಿಕ್ಕಿಲ್ಲ ಎಂದು ಕೆಲವು ಮಹಿಳೆಯರು ಅಸಮಾಧಾನ ಹೊರಹಾಕಿದ್ದಾರೆ.

Post a comment

No Reviews