
ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎನ್ನುವ ಆರೋಪದ ಹಿಂದೆಯೇ ಮತ್ತೊಂದು ಆರೋಪ ಕೇಳಿಬಂದಿದೆ. ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರೊಬ್ಬರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆಂದು ಹೇಳಿದ್ದಾರೆ.
Poll (Public Option)

Post a comment
Log in to write reviews