
ನ್ಯಾಷನಲ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಆಗಸ್ಟ್ 8 ರಿಂದ ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ನಿನ್ನೆ (ಆಗಸ್ 6) ಉಜಿರೆಯ ಸೂರ್ಯ ದೇಗುಲಕ್ಕೆ ಪತ್ನಿ ರಾಧಿಕಾ ಜೊತೆ ಯಶ್ ಭೇಟಿ ಕೊಟ್ಟ ಬೆನ್ನಲ್ಲೇ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಶುರು ಮಾಡಲು ಸಿದ್ಧತೆ ನಡೆಯುತ್ತಿದೆ. .
ನಾಳೆಯಿಂದ (ಆಗಸ್ಟ್ 8) ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದು ಸಿನಿಮಾ ವಿಮರ್ಶಕರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ. ಸದ್ಯದಲ್ಲೇ ಈ ಕುರಿತು ಅಧಿಕೃತ ಮಾಹಿತಿ ಸಿಗಲಿದೆ. ಇನ್ನೂ ಯಶ್ ಈ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಸ್ವತಃ ಯಶ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರ ಜೊತೆ ಕೆವಿಎನ್ ಸಂಸ್ಥೆ ಕೂಡ ಕೈಜೋಡಿಸಿದೆ ಎನ್ನಲಾಗಿದೆ.
Poll (Public Option)

Post a comment
Log in to write reviews