
ಚನ್ನಪಟ್ಟಣ ಸೇರಿದಂತೆ ಉಪ ಚುನಾವಣೆ ನಡೆಯುವ ಎಲ್ಲ ಮೂರು ಕ್ಷೇತ್ರಗಳಿಗೆ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದೆ ಮತ್ತು ಅಭ್ಯರ್ಥಿಯ ಆಯ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಡುವ ಶಿಫಾರಸ್ಸುಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಪರಮೇಶ್ವರ್ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷದ ನಾಯಕರು ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧವೂ ನಾಲಗೆ ಹರಿಬಿಡುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು ನ್ಯಾಯಾಲಯ ಆದೇಶಿಸಿದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಇನ್ನೂ ಉಪ ಚುನಾವಣೆಯಲ್ಲಿ ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ಹೇಳಿದರು
Poll (Public Option)

Post a comment
Log in to write reviews