ಕಿರಿಯ ವಿದ್ಯಾರ್ಥಿಗಳ ಮೇಲೆ ಬೆಲ್ಟ್ನಿಂದ ಹಲ್ಲೆ ಮಾಡಿ ವಿಕೃತಿ ಮೆರೆದ ಹಿರಿಯ ವಿದ್ಯಾರ್ಥಿಗಳು

ಕೊಪ್ಪಳ: ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಬಳಿಯಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆದಿರುವ ಆರೋಪ ಕೇಳಿ ಬಂದಿದೆ. PU ವಿದ್ಯಾರ್ಥಿಗಳು 60ಕ್ಕೂ ಅಧಿಕ ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕಟ್ಟಿಗೆ, ಬೆಲ್ಟ್ನಿಂದ ಹಲ್ಲೆ ನಡೆಸಿ ಕೆಲವರಿಗೆ ಮರ್ಮಾಂಗಕ್ಕೆ ಒದ್ದು ವಿಕೃತಿ ಮರೆದಿದ್ದಾರೆ ಎನ್ನಲಾಗುತ್ತಿದೆ. ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.
ಆಗಸ್ಟ್ 20 ರಂದು ಕ್ಷುಲ್ಲಕ ಕಾರಣಕ್ಕೆ ಜೂನಿಯರ್ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಪಾಲಕರಿಗೆ, ಶಿಕ್ಷಕರಿಗೆ ಹೇಳಿದ್ರೆ ನಿಮ್ಮನ್ನು ಸುಮ್ಮನೆ ಬಿಡೋದಿಲ್ಲಾ ಅಂತ ಬೆದರಿಕೆ ಕೂಡ ಹಾಕಿದ್ದಾರೆ. ಪಿಯು ವಿದ್ಯಾರ್ಥಿಗಳ ಪುಂಡಾಟಕ್ಕೆ ಕಡಿವಾಣ ಹಾಕಿಲ್ಲ. ಹೀಗಾಗಿ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬದಲಾಯಿಸುವಂತೆ ಹಾಗೂ ಹಲ್ಲೆ ನಡೆಸಿರುವ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕುವಂತೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲದಿದ್ದರೆ ಶಾಲೆ ಮುಂದೆ ಧರಣಿ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಘಟನೆ ಬಗ್ಗೆ ಪೋಷಕರು ಸಂಸದ ರಾಜಶೇಖರ್ ಹಿಟ್ನಾಳ್ಗೆ ದೂರು ನೀಡಿದ್ದು ಇದೀಗ ಕೊಪ್ಪಳ ಜಿಲ್ಲಾಧಿಕಾರಿಗೆ ದೂರು ನೀಡಲು ಪೋಷಕರು ಮುಂದಾಗಿದ್ದಾರೆ.
Poll (Public Option)

Post a comment
Log in to write reviews